ಕೇರಳದಲ್ಲಿ ಗರ್ಭಿಣಿ ಕಾಡೆಮ್ಮೆಯ ಮೇಲೆ ಕ್ರೌರ್ಯ ಮೆರೆದ ಮತಾಂಧರು

ಕೇರಳದಲ್ಲಿ ಮತ್ತೆ ಪ್ರಾಣಿಗಳ ಮೇಲಿನ ಕ್ರೌರ್ಯ ಮರುಕಳಿಸಿದೆ. ಗರ್ಭಿಣಿ ಕಾಡು ಎಮ್ಮೆಯನ್ನು ಅಮಾನುಷವಾಗಿ ಬೇಟೆಯಾಡಿ ಕೊಲ್ಲಲಾಗಿದೆ.

ಗರ್ಭಿಣಿ ಕಾಡು ಎಮ್ಮೆ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆ ಈಗ ಐದು ಜನರನ್ನು ಬಂಧಿಸಿದೆ. ಆರೋಪಿಗಳನ್ನು ಪುಲ್ಲಾರ ಅಬು ಅಕಾ ನಾನಿಪ್ಪ (47), ಮುಹಮ್ಮದ್ ಬುಸ್ತಾನ್ (30), ಮುಹಮ್ಮದ್ ಅನ್ಸಿಫ್ (23), ಆಶಿಕ್ (27) ಮತ್ತು ಸುಹೇಲ್ (28) ಎಂದು ಗುರುತಿಸಲಾಗಿದೆ.

Sponsored Ads


Continue Reading

ಕಳೆದ ಎರಡು ತಿಂಗಳ ಹಿಂದೆ ಇದೇ ಕೇರಳದ ಪಾಲಕ್ಕಾಡ್ ಜಿಲ್ಲೆಯ ಮನ್ನಾರ್ಕಡ್ ಅರಣ್ಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆಯನ್ನು ಹಣ್ಣಿನಲ್ಲಿ ಪಟಾಕಿ ಇಟ್ಟು ಕೊಲೆ ಮಾಡಲಾಗಿತ್ತು. ಈಗ ನಿಲಾಂಬೂರ್ ದಕ್ಷಿಣ ಅರಣ್ಯ ವಿಭಾಗದ ಕಾಳಿಕಾವ್ ವ್ಯಾಪ್ತಿಯಲ್ಲಿರುವ ಚಕ್ಕಿಕುಜಿ ಅರಣ್ಯ ಕೇಂದ್ರದ ವ್ಯಾಪ್ತಿಯ ಪುಂಚ ಅರಣ್ಯದಲ್ಲಿ ಆರೋಪಿಗಳು ಕಾಡು ಎಮ್ಮೆಯನ್ನು ಬೇಟೆಯಾಡಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 10ರಂದು ರಾತ್ರಿ ನಡೆದ ದಾಳಿಯಲ್ಲಿ ಅರಣ್ಯ ಅಧಿಕಾರಿಗಳು ಆರೋಪಿಗಳ ಮನೆಯಿಂದ ಕಾಡು ಎಮ್ಮೆ ಮಾಂಸವನ್ನು ಪತ್ತೆ ಮಾಡಿದ್ದಾರೆ. ಅರಣ್ಯ ಅಧಿಕಾರಿಗಳು ಸುಮಾರು 25 ಕೆಜಿಗಳಷ್ಟು ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 200 ಕೆಜಿಗಳಷ್ಟು ಮಾಂಸ ಇತ್ತು ಎಂದು ಅಂದಾಜಿಸಲಾಗಿದೆ. ಆರೋಪಿಗಳು ಎರಡು ತಲೆಬುರುಡೆ ಮತ್ತು ಇತರ ಕಾಡು ಎಮ್ಮೆಯ ಅವಶೇಷಗಳನ್ನು ಕಾಡಿನ ವಿವಿಧ ಭಾಗಗಳಲ್ಲಿ ಎಸೆದಿದ್ದಾರೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕಾಡು ಎಮ್ಮೆಯ ಹತ್ಯೆ ಪ್ರಕರಣದಲ್ಲಿ ಹೆಚ್ಚಿನ ಆರೋಪಿಗಳು ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ. ಆರೋಪಿಗಳನ್ನು ಇಂದು ಮಲಪ್ಪುರಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು
source : Public tv
Previous Post Next Post