ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೈನಿಕರ ಜೋಶ್ ಹೇಗಿತ್ತು ನೋಡಿ, ವೈರಲ್ ವೀಡಿಯೋ

ಜಮ್ಮು-ಕಾಶ್ಮೀರದ ಕೇರನ್ ವಲಯದ ದುಧ್ನಿಯಲ್ ಪ್ರದೇಶದಲ್ಲಿ ಭಯೋತ್ಪಾದಕರ ಉಡಾವಣಾ ಪ್ಯಾಡ್‍ಗಳ ಮೇಲೆ ಭಾರತೀಯ ಸೇನೆ ಫಿರಂಗಿದಳದ ಮೂಲಕ ಏಪ್ರಿಲ್ 10 ರಂದು ದಾಳಿ ನಡೆಸಿದೆ. ಈ ದಾಳಿಯಲ್ಲಿ ಎಂಟು ಭಯೋತ್ಪಾದಕರು ಮತ್ತು 15 ಪಾಕಿಸ್ತಾನ ಸೇನಾ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.

ದೇಶದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಅನೇಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಕಿಶನ್‍ಗಂಗಾ ನದಿಯ ದಡದಲ್ಲಿ ದುಧ್ನಿಯಲ್ ಪ್ರದೇಶವನ್ನು ಭಾರತೀಯ ಸೇನೆ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ಇದೀಗ ಭಾರತೀಯ ಸೈನಿಕರು ಲಾಕೆಟ್ ಲಾಂಚರ್ ಗಳ ಮೂಲಕ ಪಾಪಿ ಪಾಕಿಸ್ತಾನದ ಮೇಲೆ ದಾಳಿ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

Watch Video

Previous Post Next Post