ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ, ಮೂವರು ಉಗ್ರರು ಮಟಾಶ್ (ವೀಡಿಯೋ)

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹತ ಉಗ್ರರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಜಮ್ಮು-ಕಾಶ್ಮೀರದ ಅವಂತಿಪೋರಾ ಗೋರಿಪೋರಾ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಆದರಿಸಿ ಭದ್ರತಾ ಪಡೆ ಸಿಬ್ಬಂದಿ ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ನಂತರ ಸೇನೆ ಅಡಗಿದ್ದ ಉಗ್ರರನ್ನು ಕಾರ್ಯಾಚರಣೆ ನಡೆಸಿ ಹೊಡೆದುಹಾಕಿದ್ದಾರೆ, ಹತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ 50ನೇ ರಾಷ್ಟ್ರೀಯ ರೈಫಲ್ಸ್ ಕುಮಾವೂನ್ ರೆಜಿಮೆಂಟ್ ಸಿಆರ್ಪಿಎಫ್ 130 ನೇ ಬೆಟಾಲಿಯನ್, ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಪಡೆ ಭಾಗಿಯಾಗಿವೆ. ಸ್ಥಳದಲ್ಲಿ ಇನ್ನಷ್ಟು ಉಗ್ರರು ಅಡಗಿರೋ ಮಾಹಿತಿ ಇದ್ದು ಶೋಧಕಾರ್ಯ ಮುಂದುವರೆದಿದೆ. ಕಾರ್ಯಾಚರಣೆಯ ವೀಡಿಯೋ ನೋಡಿ,

Watch Video

Previous Post Next Post