ಮಹೇದ್ರ ಕುಮಾರ್ ಕೊಪ್ಪ ವಿಧಿವಶ

ಬಜರಂಗದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇಂದು ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಂಘ ಪರಿವಾರದ ಕಟು ಟೀಕಾಕಾರರಾಗಿ ಗುರುತಿಸಿಕೊಂಡಿದ್ದರು. ಸಂಘಪರಿವಾರದಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ನಂತರದಲ್ಲಿ ಬಜರಂಗದಳ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದ್ದರು. 

ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಅವರು ಈಗ ಬೆಂಗಳೂರು ನಿವಾಸಿಯಾಗಿದ್ದರು. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್ ಕಡೆಯದಾಗಿ ಮಾಡಿರುವ ಫೇಸ್ ಬುಕ್ ಪೋಸ್ಟ್
Previous Post Next Post